Publish Date: Fri, 01 Sep 2023 (18:20 IST)
Updated Date: Fri, 01 Sep 2023 (20:14 IST)
ಪ್ರತೀದಿನ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಮುಖಂಡರು ಬಾರುಕೋಲು ಚಳವಳಿ ಆರಂಭಿಸಿದರು. ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಆನೇಕ ರೈತ ಮುಖಂಡರು ಭಾಗಿಯಾಗಿದ್ರು, ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಸಮಿತಿ ಮುಖಂಡರು ಜಮಾಯಿಸಿ ಬಾರುಕೋಲು ಹಿಡಿದು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.