ಬೆಂಗಳೂರು: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಯುಗಾದಿ ಹಬ್ಬದಂದು ಹೊಸ ಪಕ್ಷವನ್ನು ಕಟ್ಟುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಬಿಎಸ್ ಯಡಿಯೂರಪ್ಪ ವಿರುದ್ಧ ಸೆಡ್ಡು ಹೊಡೆಯಲು ಹೊಸ ತಂತ್ರ ರೂಪಿಸಿದ್ದಾರೆ.
ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಂಡಾಯ ನಾಯಕರನ್ನೊಳಗೊಂಡ ಗುಂಪೊಂದು ಇದೀಗ ಯತ್ನಾಳ್‌ಗೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಬೇರೆ ಪಕ್ಷ ಬೇಕೆಂಬ ಸಮೀಕ್ಷೆ ಮಾಡಿ, ಸನಾತನ ಧರ್ಮದ ಉಳಿವಿನ ದೃಷ್ಟಿಯಲ್ಲಿ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬಿಜೆಪಿಯಲ್ಲಿ ಹಿಂದೂ ನಾಯಕರ ಭವಿಷ್ಯ ಕಾಣುತ್ತಿಲ್ಲ. ಹಿಂದೂ ನಾಯಕರನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಈ ಹಿನ್ನೆಲೆ ಬರುವ ವಿಜಯದಶಮಿ ದಿನ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತೇವೆ ಎಂದರು.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ, ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ವೈ. ವಿಜಯೇಂದ್ರ ಅವರನ್ನು ನಿರಂತರವಾಗಿ ಟೀಕಿಸಿದ್ದಕ್ಕಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.