Daily Horoscope

Select Your Language

Notifications

webdunia
webdunia
webdunia
webdunia

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

MLA Basanagouda Daddal Resignation
Photo Credit X
ರಾಯಚೂರು: ರಾಜ್ಯ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆ  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್‌, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ಹೇಳಿದರು.

ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದರು.

ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್‌ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಠಾತ್ತನೆ ಬಂದ ಕಾಡುಪ್ರಾಣಿ ಬೈಕ್‌ಗೆ ಡಿಕ್ಕಿ, ಭಯಾನಕ ವಿಡಿಯೋ