ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಕುರ್ಚಿ ಕಿತ್ತಾಟ ಭುಗಿಲೇಳುತ್ತಿದ್ದಂತೇ ಇತ್ತ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯನವರನ್ನು ಎದುರು ಹಾಕಿಕೊಂಡು ಡಿಕೆಶಿಗೆ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ಧೈರ್ಯ ಮಾಡುತ್ತಿಲ್ಲ. ಈ ನಡುವೆ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಡಿಕೆ ಶಿವಕುಮಾರ್-ಸಿದ್ದರಾಮಯ್ಯ ನಡುವೆ ಸಿಎಂ ಕುರ್ಚಿ ಫೈಟ್ ಜೋರಾಗುತ್ತಿದ್ದಾಗ ವಿಜಯೇಂದ್ರ ದೆಹಲಿಗೆ ಹೋಗಿ ಎಲ್ಲಾ ನಾಯಕರನ್ನು ಭೇಟಿ ಮಾಡಿದ್ದರು. ದೆಹಲಿಗೆ ಡಿಕೆ ಶಿವಕುಮಾರ್ ರನ್ನು ಕರೆಸಿಕೊಂಡು ವಿಜಯೇಂದ್ರ ತಾನು ಡಿಸಿಎಂ, ಡಿಕೆಶಿಗೆ ಸಿಎಂ ಪಟ್ಟ ಎಂದು ಪ್ಲ್ಯಾನ್ ಮಾಡಿದ್ದರು.
ಇದೇ ಪ್ಲ್ಯಾನ್ ಮಾಡಿಕೊಂಡು ಇಬ್ಬರೂ ಅಮಿತ್ ಶಾರನ್ನು ಭೇಟಿಯಾಗಿದ್ದರು. ಆದರೆ ಅಮಿತ್ ಶಾ ಇದಕ್ಕೆ ಸೊಪ್ಪು ಹಾಕಲಿಲ್ಲ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದಾರೆ. ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.