Select Your Language

Notifications

webdunia
webdunia
webdunia
webdunia

ಜಮೀರ್ ಅಹ್ಮದ್ ಭೇಟಿಯ ಕಾರಣ ಬಿಚ್ಚಿಟ್ಟ ಬಸನಗೌಡ ಪಾಟೀಲ್

Minister Zameer Ahmad, BJP MLA Basanagouda Patil Yatnal, Waqf Board Fight

Sampriya

ಬೆಳಗಾವಿ , ಮಂಗಳವಾರ, 17 ಡಿಸೆಂಬರ್ 2024 (17:20 IST)
Photo Courtesy X
ಬೆಳಗಾವಿ: ವಕ್ಫ್​ ವಿಚಾರ ಸೇರಿದಂತೆ ಸಿದ್ಧಾಂತ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಅವರನ್ನು ಟೀಕೆ ಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಅವರನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.

ಇನ್ನೂ ಇವರಿಬ್ಬರ ಭೇಟಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ,   ಸುವರ್ಣಸೌಧದಲ್ಲಿ ಜಮೀರ್ ಅಹಮ್ಮದ್ ಖಾನ್ ಕಚೇರಿಗೆ ಹೋಗಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದಾರೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಸಚಿವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ ಎಂದಿದ್ದಾರೆ.

ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಂದಾಣಿಕೆ ರಾಜಕೀಯ ವಿರುದ್ಧ ಯತ್ನಾಳ್ ಧ್ವನಿ ಎತ್ತುತ್ತಲೇ ಇದ್ದಾರೆ. ಹಾಗೇ ಯಾವ ಸಚಿವರ ಕಚೇರಿಗೆ ಹೋಗಿ ಯಾವುದೇ ಒಂದು ಪತ್ರ ಕೊಟ್ಟಿ ಎಂದು ಸ್ವಪಕ್ಷ ನಾಯಕರ ಹೊಂದಾಣಿಕೆ ರಾಜಕಾರಣದ ವಿರುದ್ಧ ಮಾತನಾಡಿದ್ದರು, ಇದೀಗ ಸಚಿವರನ್ನು ಭೇಟಿ ಮಾಡಿದ್ದಕ್ಕೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗುತ್ತೆ ಎಂದು ಯತ್ನಾಳ್ ಈ ಭೇಟಿ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿ: ಅಧಿವೇಶನದಲ್ಲಿನ ಚರ್ಚೆ ನಡೆಯುತ್ತಿರುವಾಗಲೇ ಮತ್ತೊಂದು ಬಾಣಂತಿ ಸಾವು