ಸಿದ್ದರಾಮಯ್ಯ ಕೆಳಗಿಳಿಸಲು ಬಿಜೆಪಿ ಮೂಲಕ ಡಿಕೆ ಶಿವಕುಮಾರ್ ಪ್ಲ್ಯಾನ್: ಸೀಕ್ರೆಟ್ ಮಿಷನ್ ರಿವೀಲ್ ಮಾಡಿದ ಬಸನಗೌಡ ಯತ್ನಾಳ್

Krishnaveni K
ಮಂಗಳವಾರ, 30 ಜುಲೈ 2024 (10:38 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಡಿಕೆ ಶಿವಕುಮಾರ್ ಅವರೇ ಬಿಜೆಪಿ ಪಾದಯಾತ್ರೆ ಪ್ಲ್ಯಾನ್ ಮಾಡಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ತಮ್ಮ ಪಕ್ಷದವರ ವಿರುದ್ಧವೇ  ಬೀಡುಬೀಸಾದ ಹೇಳಿಕೆಗಳಿಂದ ಸುದ್ದಿಯಾಗುವ ಬಸನಗೌಡ ಯತ್ನಾಳ್ ಈಗ ಬಿವೈ ವಿಜಯೇಂದ್ರ ಜೊತೆ ಸೇರಿಕೊಂಡು ಡಿಕೆಶಿಯೇ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಪಾದ ಯಾತ್ರೆಯ ಪ್ಲ್ಯಾನ್ ಮಾಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿದೆ.

ಮುಡಾ ಅಧ್ಯಕ್ಷ ಎಚ್ ವಿ ರಾಜೀವ್ ಬಿಜೆಪಿಯಲ್ಲಿದ್ದಾಗಲೇ ಹಗರಣ ನಡೆದಿತ್ತು. ಬಳಿಕ ಅವರನ್ನು ಕಾಂಗ್ರೆಸ್ ಗೆ ಸೇರಿಸಲಾಯಿತು. ಅವರನ್ನು ಯಾರು ಕಾಂಗ್ರೆಸ್ ಗೆ ಸೇರಿಸಿದರು ಎನ್ನೋದು ಎಲ್ಲರಿಗೂ ಗೊತ್ತಿದೆ.  ಮುಡಾ ವಿಚಾರವಾಗಿ ಬಿ ವೈ ವಿಜಯೇಂದ್ರ ನಡೆಸುತ್ತಿರುವ ಹೋರಾಟದಲ್ಲಿ ಡಿಕೆಶಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಬಿಜೆಪಿ ಆಗಸ್ಟ್ 3 ರಂದು ಮೈಸೂರಿಗೆ ಪಾದಯಾತ್ರೆ ನಡೆಸಲು  ತೀರ್ಮಾನಿಸಿದೆ. ಈ ಹೋರಾಟ ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಮಾಡಿರುವ ಪ್ಲ್ಯಾನ್. ಡಿಸಿಎಂ ಡಿಕೆ ಶಿವಕುಮಾರ್ ಆದೇಶದಂತೇ ಪಾದಯಾತ್ರೆ ನಡೆಯುತ್ತಿದೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣವಿದೆ. ಡಿಕೆ ಮಾಡಿದ ಉಪಕಾರ ತೀರಿಸಲಿಕ್ಕೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಮುಂದಿನ ಸುದ್ದಿ
Show comments