ಕಾಂಗ್ರೆಸ್ ಸರ್ಕಾರ ಉರುಳಿಸಲು 1,200 ಕೋಟಿ ರೆಡಿ: ಬಿಜೆಪಿಗೇ ತಂದಿಟ್ಟ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

Krishnaveni K
ಸೋಮವಾರ, 30 ಸೆಪ್ಟಂಬರ್ 2024 (15:06 IST)
Photo Credit: X
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು 1,200 ಕೋಟಿ ರೂ. ರೆಡಿಯಾಗಿದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಈಗ ಸ್ವಪಕ್ಷ ಬಿಜೆಪಿಗೇ ಮುಜುಗರ ತಂದಿತ್ತಿದೆ. ಆದರೆ ಯತ್ನಾಳ್ ಹೇಳಿಕೆಗೆ ಡಿಕೆ ಶಿವಕುಮಾರ್ ಸಾಥ್ ನೀಡಿದ್ದಾರೆ.

ಬಿಜೆಪಿ ಶಾಸಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕಿಡಿ ಕಾರುತ್ತಲೇ ಇರುತ್ತಾರೆ. ಅವರ ಹೇಳಿಕೆಗಳು ಕೆಲವೊಮ್ಮೆ ಪಕ್ಷಕ್ಕೇ ಮುಜುಗರ ತಂದಿಡುತ್ತದೆ. ಇದೀಗ 1,200 ಕೋಟಿ ರೂ. ರೆಡಿಯಿರುವ ಗಂಭೀರ ಆರೋಪ ಮಾಡಿ ಬಿಜೆಪಿಯನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಇನ್ನೊಂದೆಡೆ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಸಿಲುಕಿಸಿ ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಇಂಬು ನೀಡಿದಂತಾಗಿದೆ.

ಕೆಲವು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಗುಂಪು 1,200 ಕೋಟಿ ರೂ. ರೆಡಿ ಮಾಡಿಕೊಂಡಿದ್ದು ಕಾಂಗ್ರೆಸ್ ಸರ್ಕಾರ ಉರುಳಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು. ಇದನ್ನು ಡಿಕೆ ಶಿವಕುಮಾರ್ ಕೂಡಾ ಅನುಮೋದಿಸಿದ್ದು, ನಮಗೂ ಕೆಲವೊಂದು ಮೂಲಗಳಿಂದ ಈ ಮಾಹಿತಿ ಬಂದಿದೆ. ಬಿಜೆಪಿ ನಮ್ಮ ಸರ್ಕಾರ ಉರುಳಿಸಲು ಪ್ರಯತ್ನ ನಡೆಸುತ್ತಿದೆ ಎಂದಿದ್ದಾರೆ.

ಅಲ್ಲದೆ, 1,200 ಕೋಟಿ ರೂ. ವಿಚಾರವನ್ನು ನಾವು ಹೈಕಮಾಂಡ್ ಗಮನಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ಐಟಿ, ಇಡಿ ಇಲಾಖೆಗೆ ದೂರು ನೀಡುವುದಾಗಿ ಹೇಳಿದ್ದಾರೆ. ಈ ವಿಚಾರವನ್ನು ಕಾಂಗ್ರೆಸ್ ಮತ್ತೊಂದು ರಾಜಕೀಯ ದಾಳವಾಗಿ ಬಳಸುತ್ತಿದ್ದರೆ ಇತ್ತ ಬಿಜೆಪಿಗೆ ತನ್ನದೇ ಪಕ್ಷದ ನಾಯಕನ ಹೇಳಿಕೆಯಿಂದ ಸಂಕಷ್ಟ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments