Select Your Language

Notifications

webdunia
webdunia
webdunia
webdunia

ಬಸನಗೌಡ ಯತ್ನಾಳ್ ಹೇಳಿಕೆ ಹೈಕಮಾಂಡ್ ಗಮನಕ್ಕೆ ಬಂದಿದೆ: ಸಚಿವ ಪ್ರಲ್ಹಾದ್ ಜೋಶಿ

Chief Minister Siddaramaiah, Minister Prahlad Joshi, MLA Basanagowda Patil Yatnal,

Sampriya

ಬೆಂಗಳೂರು , ಬುಧವಾರ, 2 ಅಕ್ಟೋಬರ್ 2024 (16:52 IST)
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳನ್ನು ಬಿಜೆಪಿ ಹೈಕಮಾಂಡ್, ರಾಷ್ಟ್ರೀಯ ನಾಯಕರ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯತ್ನಾಳ್ ಅವರು ಪಕ್ಷದ ನೀತಿ ನಿರೂಪಣೆಗೆ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರು ಪಕ್ಷದ ಶಾಸಕರು. ನಿಮ್ಮ ಹೈಕಮಾಂಡಿಗೆ ಕ್ರಮ ಕೈಗೊಳ್ಳುವ ಶಕ್ತಿ ಇಲ್ಲವೇ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದರು. ಪಕ್ಷದ ವೇದಿಕೆಯಲ್ಲೇ ಎಲ್ಲವನ್ನೂ ಚರ್ಚಿಸಬೇಕು. ಯಾರೂ ಬಹಿರಂಗ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಕೋರ್ಟಿನಿಂದ ಸಿಎಂ ಕರಾಮತ್ತು ದಾಖಲಾಗಿದೆ: ನಾನು ಡಿನೋಟಿಫೈ ಮಾಡಿದ್ದೇನಾ? ನಾನು ತಪ್ಪೇನು ಮಾಡಿದ್ದೇನೆ? ನಾನು ಸೈನ್ ಮಾಡಿದ್ದೇನಾ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯನವರೇ, ನೀವು ದಯವಿಟ್ಟು ಒಂದು ಸಂಗತಿ ಅರ್ಥ ಮಾಡಿಕೊಳ್ರಿ. ನಿಮ್ಮ ಬಗ್ಗೆ ಕೋರ್ಟ್ ಏನು ಹೇಳಿದೆ ಎಂಬುದನ್ನು ನೋಡಿ ಎಂದು ತಿಳಿಸಿದರು.

2004ರಿಂದ ಈಚೆಗೆ ನೀವು ಸತತವಾಗಿ ಒಂದಲ್ಲ ಒಂದು ಸ್ಥಾನದಲ್ಲಿ ಇರಲಿಲ್ಲ ಎಂದಾದರೆ, ಇದು ಇನ್ಯಾರಿಗೂ ಸಾಮಾನ್ಯ ಮನುಷ್ಯನಿಗೆ ಮುಟ್ಟಲು ಸಾಧ್ಯವೇ ಇಲ್ಲ. ಮತ್ತು ಇದು ಮುಖ್ಯಮಂತ್ರಿಯ ಪತ್ನಿಗೆ ಮುಖ್ಯಮಂತ್ರಿಗೆ ಗೊತ್ತಾಗದೇ ಆಗಲು ಸಾಧ್ಯ ಇಲ್ಲ. ಈ ರೀತಿ ಕೋರ್ಟ್ ತೀವ್ರವಾಗಿ ಹೇಳಿದೆ ಎಂದರು.

ಮುಡಾದಿಂದ ಡಿನೋಟಿಫಿಕೇಶನ್, ಜಾಗ ಟ್ರಾನ್ಸ್‍ಫರ್ ಆದದ್ದು, ಅವುಗಳ ಮೌಲ್ಯ 62 ಕೋಟಿ ಎಂದದ್ದು, ಯಾವುದೋ ಜಾಗಕ್ಕೆ ಪರಿಹಾರವಾಗಿ 14 ನಿವೇಶನ ಕೊಟ್ಟದ್ದನ್ನು ವಿಜಯೇಂದ್ರ ಅವರು, ಬಿಜೆಪಿ ಮೊದಲಿನಿಂದಲೇ ಹೇಳುತ್ತಿದ್ದೇವೆ. ಮಾನ್ಯ ರಾಜ್ಯಪಾಲರ ಸ್ಯಾಂಕ್ಷನ್ ಬಳಿಕ ನೀವು ಏನೇನು ಕರಾಮತ್ತು ಮಾಡಿದ್ದೀರೆಂದು ಕೋರ್ಟ್ ಎಲ್ಲವನ್ನೂ ಸ್ಪಷ್ಟವಾಗಿ ದಾಖಲಿಸಿದೆ. ನೀವು ಬಾಬಾಸಾಹೇಬ ಡಾ. ಅಂಬೇಡ್ಕರರಿಗೆ ಅಪಮಾನ ಮಾಡಿದವರು; ಅವರನ್ನು ಎರಡೆರಡು ಬಾರಿ ಸೋಲಿಸಿದವರು. ಸಂವಿಧಾನಕ್ಕೆ ಗೌರವ ಕೊಡದ ನೀವು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸಂವಿಧಾನದ ಪ್ರತಿ ಹಿಡಿದು ಓಡಾಡಿದ್ದೀರಿ ಎಂದು ಟೀಕಿಸಿದರು.

ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಯ ಪಾತ್ರವನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಆದರೂ ನೀವು ರಾಜೀನಾಮೆ ಕೊಡದಿದ್ದರೆ ಭಂಡತನ ಪ್ರದರ್ಶನ ಮಾಡಿದಂತೆ ಎಂದು ಆಕ್ಷೇಪಿಸಿದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಮತ್ತು ರಾಬರ್ಟ್ ವಾಧ್ರಾ ಆರ್ಥಿಕ ಅಪರಾಧದಲ್ಲಿ ಜಾಮೀನಿನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಲೋ ಕಮಾಂಡ್ ಆಗಿದೆ ಎಂದು ಅವರು ಆರೋಪಿಸಿದರು

Share this Story:

Follow Webdunia kannada

ಮುಂದಿನ ಸುದ್ದಿ

ದಾವಣಗೆರೆಯಲ್ಲಿ ಹಿಂದೂ ಹೆಸರಿನಲ್ಲಿ ನೆಲೆಸಿದ್ದ ಪಾಕಿಸ್ತಾನ ಕುಟುಂಬ ವಶಕ್ಕೆ