Select Your Language

Notifications

webdunia
webdunia
webdunia
webdunia

ಬಸನಗೌಡ ಯತ್ನಾಳ್ ಬಿಜೆಪಿಗೆ ಸೇರಲು ನವದೆಹಲಿಯಲ್ಲಿ ಮಾತುಕತೆ

ಬಸನಗೌಡ ಯತ್ನಾಳ್ ಬಿಜೆಪಿಗೆ ಸೇರಲು ನವದೆಹಲಿಯಲ್ಲಿ ಮಾತುಕತೆ
ಬೆಂಗಳೂರು , ಸೋಮವಾರ, 12 ಫೆಬ್ರವರಿ 2018 (12:57 IST)
ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ.
 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದು, ಮಾತುಕತೆ ನಡೆಸಿ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ ಮಾಡಿಕೊಳ್ಳಲಿದ್ದಾರೆ.
 
ಪಕ್ಷ ಸೇರ್ಪಡೆ ರಾಷ್ಟ್ರೀಯ ಅಧ್ಯಕ್ಷರಿಂದ ಒಪ್ಪಿಗೆ ಪಡೆದುಕೊಂಡ ನಂತರ ಬಿಜಾಪುರದಲ್ಲಿ ಮಾರ್ಚ್ 4ರಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. 
 
ಯತ್ನಾಳ್ ಸೇರ್ಪಡೆಗೆ ರಾಜ್ಯ ಘಟಕದ ಕೆಲ ನಾಯಕರ ವಿರೋಧವಿದೆ. ಆದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಾಪುರ ನಗರ ಅಥವಾ ದೇವರ ಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

‘ಕರ್ನಾಟಕದಲ್ಲಿಈ ಬಾರಿಯೂ ನಾವೇ ಗೆಲ್ಲೋದು’