Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ಸಿನವರನ್ನು ಕಟೆಕಟೆಯಲ್ಲಿ ನಿಲ್ಲಿಸಿ: ಬಸವರಾಜ ಬೊಮ್ಮಾಯಿ

Basavaraj Bommai
ಹುಬ್ಬಳ್ಳಿ: ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮಹಿಳಾ ಮೀಸಲಾತಿ ಮಸೂದೆಯನ್ನು ಅನುಮೋದಿಸುವಂತೆ ಮಾಡಿ 2029ಕ್ಕೆ ಮಹಿಳಾ ಮೀಸಲಾತಿಯನ್ನು ಅನುಷ್ಠಾನಕ್ಕೆ ತರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸದಿಂದ ನುಡಿದರು.

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹುಬ್ಬಳ್ಳಿಯಲ್ಲಿ ಇಂದು ನಡೆದ ‘ಬೃಹತ್ ಜನಾಕ್ರೋಶ ಮಹಿಳಾ ಪ್ರತಿಭಟನಾ ಸಭೆ’ಯಲ್ಲಿ ಅವರು ಮಾತನಾಡಿದರು. ಆ ಕೆಲಸ ಆಗಬೇಕಿದ್ದರೆ ನಾವೆಲ್ಲರೂ ಮನೆಮನೆಗೆ ತೆರಳಿ ವಿರೋಧ ಮಾಡಿದ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷದವರನ್ನು ಕಟೆಕಟೆಯಲ್ಲಿ ನಿಲ್ಲಿಸಬೇಕು ಎಂದು ಸೂಚಿಸಿದರು.

ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ ಹೆಚ್ಚಾಗಿದೆ. ಲವ್ ಜಿಹಾದ್ ಪ್ರತಿನಿತ್ಯ ನಡೆಯುತ್ತಿದೆ ಎಂದು ಟೀಕಿಸಿದರು. ಭಯದ ವಾತಾವರಣದಲ್ಲಿ ಹೆಣ್ಮಕ್ಕಳು ಬದುಕುವಂತಾಗಿದೆ. ಈ ಅನೀತಿ, ಅತ್ಯಾಚಾರದ ವಿರುದ್ಧ ಮಹಿಳಾ ಶಕ್ತಿ ಧ್ವನಿ ಎತ್ತಲು ಅವರಿಗೆ ಮೀಸಲಾತಿ ನೀಡಬೇಕಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರು ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಮೋದಿಜೀ ಅವರು ಆದ್ಯತೆ ಕೊಟ್ಟವರು ಎಂದು ತಿಳಿಸಿದರು. ಮಹಿಳಾ ಮೀಸಲಾತಿ ಕುರಿತ ಕನಸನ್ನು ನನಸು ಮಾಡುವ ಶಕ್ತಿ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರಿಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
 
 
 
 
  

Share this Story:

Follow Webdunia kannada

ಮುಂದಿನ ಸುದ್ದಿ

ಇಂಡಿ ಒಕ್ಕೂಟದವರು ದೇಶ ಒಡೆಯುವ ಷಡ್ಯಂತ್ರ ಮಾಡುತ್ತಿದ್ದಾರೆ: ಶೋಭಾ ಕರಂದ್ಲಾಜೆ