Select Your Language

Notifications

webdunia
webdunia
webdunia
Friday, 4 April 2025
webdunia

ನಿಮಗೆ ಜನರೇ ಕಪಾಳಕ್ಕೆ ಹೊಡೀತಾರೆ: ಶಿವರಾಜ್ ತಂಗಡಗಿಗೆ ಬೊಮ್ಮಾಯಿ ತಿರುಗೇಟು

Basavaraj Bommai

Krishnaveni K

ಬೆಂಗಳೂರು , ಮಂಗಳವಾರ, 26 ಮಾರ್ಚ್ 2024 (14:04 IST)
ಬೆಂಗಳೂರು: ಮೋದಿ ಮೋದಿ ಎಂದು ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡಿಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವರ್ಷಕ್ಕೆ 1 ಕೋಟಿ ಜನರಿಗೆ ಉದ್ಯೋಗ ಕೊಡುತ್ತೇನೆ ಎಂದು ಅಧಿಕಾರಕ್ಕೆ ಬಂದಿದ್ದ ಮೋದಿ ಹತ್ತು ವರ್ಷದಲ್ಲಿ 10 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ ಉದ್ಯೋಗ ಕೊಡದೇ ಯುವಕರಿಗೆ ವಂಚಿಸಿದೆ.

ಹೀಗಾಗಿ ಇನ್ನು ಮುಂದೆ ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಬಾರಿಸಬೇಕು ಎಂದು ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಈಗ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ‘ಹೀಗೆ ಮಾತನಾಡ್ತಾ ಇದ್ದರೆ ಜನರೇ ಮತಗಳ ಮೂಲಕ ಕಪಾಳಕ್ಕೆ ನೀಡುತ್ತಾರೆ’ ಎಂದು ತಿರುಗೇಟು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿ ಬಿಜೆಪಿ ಪ್ರಚಾರಕ್ಕೆ ಕಿಚ್ಚ ಸುದೀಪ್ ಬರುವ ಬಗ್ಗೆ ಬಸವರಾಜ ಬೊಮ್ಮಾಯಿ ಹೇಳಿಕೆ