Publish Date: Wed, 04 May 2022 (19:47 IST)
Updated Date: Wed, 04 May 2022 (19:49 IST)
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಳುವಾಗಿರುವ ಪಿಎಸ್‌ಐ ನೇಮಕಾತಿ ಅಕ್ರಮ, 40% ಕಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 40% ಕಮಿಷನ್ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಪೂರ್ಣ ಬೆಂಬಲ ಸಿಕ್ಕಿದೆ. ನಾ ಖಾವೋಂಗಾ ನಾ ಖಾನೇ ದೂಂಗಾ ಎಂದು ಹೇಳುತ್ತಾರೆ. ಆದರೆ, ಯಾವುದೂ ಆಚರಣೆಯಲ್ಲಿಲ್ಲ. ಭ್ರಷ್ಟರ ವಿರುದ್ಧ ಕ್ರಮ ಜರುಗಿಸಿಲ್ಲ.ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇ 10ರಷ್ಟು ಕಮಿಷನ್ ಆರೋಪ ಮಾಡಿದ ಬಿಜೆಪಿ ಈಗ 40% ಕಮಿಷನ್ ಗಳಿಸುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿಲ್ಲ.ಪಿಎಸ್‌ಐ ನೇಮಕಾತಿ ಅಕ್ರಮದ ಆರೋಪಿತರನ್ನು ಬಂಧಿಸುವಲ್ಲಿ ವಿಳಂಬ ಮಾಡುವ ಮೂಲಕ ತನಿಖೆ ಹಾದಿ ದಿಕ್ಕು ತಪ್ಪಿಸಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪಾಲ್ ವರ್ಗಾವಣೆ ಮಾಡುವ ಮೂಲಕ ಅಕ್ರಮದ ತನಿಖೆ ಕುಂಠಿತಗೊಳಿಸಲಾಗಿದೆ.