ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಸಂಯೋಜಕರಾಗಿ ಶಂಕರ್‌ ಪಾಗೋಜಿ

Webdunia
ಗುರುವಾರ, 15 ಸೆಪ್ಟಂಬರ್ 2022 (14:10 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಶಂಕರ್‌ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಆಗಸ್ಟ್‌ 22 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾಗಿರಾಗಿದ್ದರು.
ಪತ್ರಕರ್ತ, ಲೇಖಕ ಶಂಕರ ಪಾಗೋಜಿ ಮೂಲತಃ ಧಾರವಾಡ ಜಿಲ್ಲೆ, ಧಾರವಾಡ ತಾಲೂಕಿನ ದೇವಗಿರಿಯವರು. ಮಲೆನಾಡಿನ ಕೊನೆಯ ಸೆರಗು ಸುಮಾರು 500 ಜನಸಂಖ್ಯೆ ಇರುವ ಸಣ್ಣ ಗ್ರಾಮದಲ್ಲಿ ನಾಲ್ಕನೇ ತರಗತಿಯವರೆಗಿನ ಪ್ರಾಥಮಿಕ ಶಿಕ್ಷಣ ಮುಗಿಸಿ ನಂತರ ಮಲೆನಾಡು ಶಿಕ್ಷಣ ಸಮಿತಿ ನಿಗದಿಯಲ್ಲಿ ಪ್ರೌಢಶಿಕ್ಷಣವನ್ನು ಪೂರ್ಣಗೊಳಿಸಿದರು. ಪಿಯುಸಿಯನ್ನು ಧಾರವಾಡದ ಆಲೂರು ವೆಂಕಟರಾವ್ ಜೂನಿಯರ್ ಕಾಲೇಜಿನಲ್ಲಿ ಓದಿದ ಅವರು ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದರು. ಬಿ.ಎ. ಪದವಿಯನ್ನು ಧಾರವಾಡದ ಕಿಟಲ್ ಕಾಲೇಜಿನಲ್ಲಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು. ಆನಂತರದಲ್ಲಿ ಕರ್ನಾಟಕದ ಪ್ರಮುಖ ದಿನ ಪತ್ರಿಕೆಗಳಾದ ವಿಜಯ ಕರ್ನಾಟಕ, ಸೂರ್ಯೋದಯ, ಉಷಾ ಕಿರಣ ಪತ್ರಿಕೆಗಳಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸಿದ ಅವರು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ಕಾರ್ಯ ಚಟುವಟಿಕೆ ಮುಂದುವರೆಸಿ ಕಸ್ತೂರಿ ನ್ಯೂಸ್ ಹಾಗೂ ಸುವರ್ಣ ನ್ಯೂಸ್ ಚಾನೆಲ್ ಗಳಲ್ಲಿ ಕಾರ್ಯನಿರ್ವಹಿಸಿ, ಪ್ರಸ್ತುತ ಉದಯವಾಣಿ ದಿನಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲಾ ದಿನಗಳಿಂದಲೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಶಂಕರ ಪಾಗೋಜಿ ಅವರು ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಕಾಲೇಜು ದಿನಗಳನ್ನು ಶೋಧ ಎನ್ನುವ ಸ್ವಯಂ ಸೇವಾ ಸಂಸ್ಥೆಯೊಂದಿಗೆ ವಿದ್ಯಾರ್ಥಿ ಸಂಘಟಕರಾಗಿ ಗ್ರಾಮ ಸಭೆಗೆ ಪರಮಾಧಿಕಾರ, ಗ್ರಾಮ ನೈರ್ಮಲ್ಯದ ಕುರಿತು ಬೀದಿ ನಾಟಕಗಳನ್ನು ವಿವಿಧ ಜಿಲ್ಲೆಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಅಲ್ಲದೇ ಐಪಿಪಿ9 ಯೋಜನೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಜನ ಸಂಖ್ಯೆ ನಿಯಂತ್ರಣ ಕುರಿತ ಬೀದಿನಾಟಕದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments