Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಬಿಎಸ್‌ವೈ ಧರ್ಮವಂತರಾ?ಬಿಜೆಪಿ ಧರ್ಮವಂತ ಪಕ್ಷವೇ?: ಸಚಿವ ರಾಯರೆಡ್ಡಿ

webdunia
ಸೋಮವಾರ, 13 ಮಾರ್ಚ್ 2017 (13:10 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಧರ್ಮವಂತರಾ?ಯಾವ ಧರ್ಮದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಪ್ರಶ್ನಿಸಿದ್ದಾರೆ. 
 
ಬಿಜೆಪಿ ಬಾಯಿಯಲ್ಲಿ ರಾಮನಾಮ ಬಗಲಲ್ಲಿ ಚೂರಿ, ಗೋವಾ, ಮಣಿಪುರ ರಾಜ್ಯದಲ್ಲಿ ಜನರು ಬಹುಮತ ನೀಡದಿದ್ದರೂ ಸರಕಾರ ರಚನೆ ಮಾಡುತ್ತಿರುವುದು ಧರ್ಮವಂತ ಕೆಲಸಾನಾ? ಎಂದು ತಿರುಗೇಟು ನೀಡಿದ್ದಾರೆ.
 
ವಾಮಮಾರ್ಗದ ಮೂಲದ ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಬಿಜೆಪಿ, ಕೀಳು ರಾಜಕಾರಣ ಮಾಡಿಯಾದರೂ ಅಧಿಕಾರ ಕಬಳಿಸಲು ಯತ್ನಿಸುತ್ತಿದೆ. ಆದರೆ, ಜನತೆ ಇಂತಹ ವಿಚ್ಚಿದ್ರಕಾರಿ ಶಕ್ತಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪ್ರಾಮಾಣಿಕವಾಗಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದ್ದರೂ ಬಿಜೆಪಿ ಮುಖಂಡರು ಮನಬಂದಂತೆ ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷಕ್ಕೆ ಜನತೆ ಅಧಿಕಾರಕ್ಕೆ ಕೊಟ್ಟು ನೋಡಿದ್ದಾರೆ.ಅಧಿಕಾರದಲ್ಲಿದ್ದಾಗ ಯಾವ ರೀತಿ ಜನಪರ ಕಾರ್ಯನಿರ್ವಹಿಸಿದ್ದಾರೆ ಎನ್ನುವುದು ಜನತೆಗೆ ತಿಳಿದಿದೆ. ಆದ್ದರಿಂದ ಜನತೆ ಮತ್ತೊಮ್ಮೆ ಇಂತಹ ತಪ್ಪು ಮಾಡಲು ಹೋಗುವುದಿಲ್ಲ ಎಂದು ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ: ಖರ್ಗೆ ಆಕ್ರೋಶ