Daily Horoscope

Select Your Language

Notifications

webdunia
webdunia
webdunia
webdunia

ಸಿಎಂ ಡಿಕೆ ಶಿವಕುಮಾರ್ ಫೋನ್ ಕರೆ, ಬಿಕೆ ಹರಿಪ್ರಸಾದ್ ಭೇಟಿ ಬಳಿಕ ರಾಜೀನಾಮೆ ನೀಡಲು ಒಪ್ಪಿದ ಬಸವರಾಜ ಹೊರಟ್ಟಿ

Basavaraja horatti-BK Hariprasad
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಮ್ಮತಿಸಿದ್ದಾರೆ ಎಂಬ ಮಹತ್ವದ ರಾಜಕೀಯ ಬೆಳವಣಿಗೆಯೊಂದು ಹೊರಬಿದ್ದಿದೆ.
 
ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಫೋನ್ ಕರೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ. ಕೆ. ಹರಿಪ್ರಸಾದ್ ಅವರ ನೇರ ಭೇಟಿ ಮತ್ತು ಸುದೀರ್ಘ ಮಾತುಕತೆಯ ಬೆನ್ನಲ್ಲೇ ಹೊರಟ್ಟಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಬಸವರಾಜ ಹೊರಟ್ಟಿ ಅವರೊಂದಿಗೆ ಫೋನ್‌ನಲ್ಲಿ ಸುದೀರ್ಘ ಮಾತುಕತೆ ನಡೆಸಿ, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಶಯವನ್ನು ವಿವರಿಸಿದ್ದಾರೆ ಎನ್ನಲಾಗಿದೆ.
 
ಫೋನ್ ಕರೆಯ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಬಿ. ಕೆ. ಹರಿಪ್ರಸಾದ್ ಅವರು ಬಸವರಾಜ ಹೊರಟ್ಟಿ ಅವರನ್ನು ಖುದ್ದಾಗಿ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಮೇಲ್ಮನೆಯಲ್ಲಿ ರಾಜಕೀಯ ಸಮತೋಲನ ಮತ್ತು ಕಾಂಗ್ರೆಸ್ ಅಧಿಕಾರಕ್ಕೇರುವ ದೃಷ್ಟಿಯಿಂದ ಈ ನಡೆ ಅತ್ಯಂತ ಪ್ರಮುಖವಾಗಿದೆ.
 
ಹಿರಿಯ ನಾಯಕರ ಸಂಧಾನ ಮತ್ತು ಸಮಾಲೋಚನೆಗೆ ಸ್ಪಂದಿಸಿರುವ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ತಮ್ಮದೇ ಪಕ್ಷದ ನಾಯಕರನ್ನು ಸಭಾಪತಿಯನ್ನಾಗಿ ಆಯ್ಕೆ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿದ ನಂತರ ನೂತನ ಸಭಾಪತಿ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಸ್ಥಾನದಲ್ಲಿ ವೈದ್ಯರ ಭೇಟಿಗೆ ಬಂದ ಮಹಿಳೆಗೆ ಬಂದಿದ್ದು ಇದೆಂಥಾ ದುರಂತ: ಭೀಕರ Video