Publish Date: Sat, 17 Mar 2018 (11:45 IST)
Updated Date: Sat, 17 Mar 2018 (11:58 IST)
ಬೆಂಗಳೂರು: ವೀರಪ್ಪ ಮೊಯಿಲಿ ಟ್ವೀಟ್ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿರುವ ಬಗ್ಗೆ ಸಚಿವ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಬಿಜೆಪಿಯವರದ್ದೇ ಕುಮ್ಮಕ್ಕು ಎಂದಿದ್ದಾರೆ.
ಮೊಯಿಲಿಯವರು ಈಗಾಗಲೇ ತಮ್ಮ ಟ್ವೀಟ್ ಬಗ್ಗೆ ಸ್ಷಪ್ಟನೆ ಕೊಟ್ಟಿದ್ದಾರೆ. ಇದೆಲ್ಲಾ ದೊಡ್ಡ ವಿಚಾರವೇ ಅಲ್ಲ. ಹಾಗಿದ್ದರೂ ಬಿಜೆಪಿಯವರಿಗೆ ಸಂಸ್ಕೃತಿ ಗೊತ್ತಿಲ್ಲ. ಮಾಡಕ್ಕೆ ಬೇರೆ ಕೆಲಸವಿಲ್ಲ. ಅದಕ್ಕೇ ಈ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ರಾಯರೆಡ್ಡಿ ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹಣ ಹಂಚಿಕೆ ನಡೆಯುತ್ತದೆ ಎಂಬ ಆರೋಪಗಳಿಗೆ ಉತ್ತರಿಸಿದ ಅವರು ಈ ರೀತಿ ಸಂಸ್ಕೃತಿ ಹಿಂದಿನಿಂದಲೂ ಇಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ