Select Your Language

Notifications

webdunia
webdunia
webdunia
webdunia

ಮಂತ್ರಿ ಸ್ಥಾನ ನೀಡುವಂತೆ ಎಂ.ಬಿ.ಪಾಟೀಲ್ ಪರ ಸ್ವಾಮೀಜಿಗಳ ಬ್ಯಾಟಿಂಗ್

ಮಂತ್ರಿ ಸ್ಥಾನ ನೀಡುವಂತೆ ಎಂ.ಬಿ.ಪಾಟೀಲ್ ಪರ ಸ್ವಾಮೀಜಿಗಳ ಬ್ಯಾಟಿಂಗ್
ವಿಜಯಪುರ , ಬುಧವಾರ, 12 ಡಿಸೆಂಬರ್ 2018 (15:40 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಗೊಳಿಸಿರುವಂತೆ ಮತ್ತೊಂದೆಡೆ ಸಚಿವ ಸ್ಥಾನ ಆಕಾಂಕ್ಷಿಗಳ ಪರವಾಗಿ ಸ್ವಾಮೀಜಿಗಳು ಒತ್ತಡ ಹೇರಲಾರಂಭಿಸಿದ್ದಾರೆ.

ಮಾಜಿ ಸಚಿವ ಹಾಗೂ ಶಾಸಕ ಎಂ.ಬಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಎಂ.ಬಿ.ಪಾಟೀಲ್ ರು ನೀರಾವರಿ ಇಲಾಖೆಯನ್ನು ಈ ಹಿಂದೆ ಸಮರ್ಥವಾಗಿ ನಿಭಾಯಿಸಿದ್ದು, ಈ ಬಾರಿಯೂ ಅವರಿಗೆ ನೀರಾವರಿ ಖಾತೆ ನೀಡುವಂತೆ ಆಗ್ರಹ ಮಾಡಿದ್ದಾರೆ.

ಮೈತ್ರಿ ಸರಕಾರದ ಪ್ರಮುಖರು ಒಂದು ವೇಳೆ ಎಂ.ಬಿ.ಪಾಟೀಲ್ ರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯಮಾಡಿದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಉತ್ತರ ಕರ್ನಾಟಕದ ಬಗ್ಗೆ ನಿಜವಾದ ಕಾಳಜಿ ಇದ್ದರೆ ಹೆಚ್ಚಿನ ಸಚಿವ ಸ್ಥಾನಗಳನ್ನು ಈ ಭಾಗಕ್ಕೆ ನೀಡಬೇಕೆಂದು ಸ್ವಾಮೀಜಿ ಆಗ್ರಹ ಮಾಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ದತ್ತ ಜಯಂತಿಗೆ ಸಡಗರದ ಚಾಲನೆ