Select Your Language

Notifications

webdunia
webdunia
webdunia
webdunia

ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ

BBMP's negligence is another life sacrifice
bangalore , ಶುಕ್ರವಾರ, 17 ಸೆಪ್ಟಂಬರ್ 2021 (21:10 IST)
ಬೆಂಗಳೂರು: ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ ಸಂಭವಸಿದ್ದು, ಬೈಕ್ ಸವಾರ ಮನೋಜ್ ಎಂಬುವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಮನೋಜ್ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಘಟನೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಸವಾರ ಮನೋಜ್ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿ ಸವಾರ ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಮನೋಜ್ ಮೃತಪಟ್ಟಿದ್ದಾರೆ.
ಮನೋಜ್ ಮೃತದೇಹ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಮನೋಜ್ ಶಿರಸಿ ಮೂಲದವರಾಗಿದ್ದು, ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
axxicdent

Share this Story:

Follow Webdunia kannada

ಮುಂದಿನ ಸುದ್ದಿ

ಸೈಟ್ ಮಾರಾಟ ಮಾಡಿಕೊಡುವುದಾಗಿ ನಿವೃತ್ತ ಎಸಿಪಿಗೆ ವಂಚನೆ