ನಗರದ ರಸ್ತೆಗುಂಡಿಗಳನ್ನ ಮುಚ್ಚಲು ವರ್ಚುವಲ್ ಸಭೆ ನಡೆಸಿದ ಬಿಬಿಎಂಪಿ‌ ಆಡಳಿತಗಾರ ರಾಕೇಶ್ ಸಿಂಗ್

Webdunia
ಶನಿವಾರ, 5 ನವೆಂಬರ್ 2022 (19:07 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಯುದ್ಧೋಪಾದಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಎಲ್ಲಾ 8 ವಲಯಗಳಲ್ಲೂ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಿ ಗುಣಮಟ್ಟವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಶೀಘ್ರವೇ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲು  ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 
 
ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿಯ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್-ಆರ್ಟಿರಿಯಲ್ ಹಾಗೂ ವಾರ್ಡ್ ಗಳಲ್ಲಿ ರಸ್ತೆಗುಂಡಿಗಳನ್ನು ಗುರುತಿಸಿ ಯೋಜನೆ ರೂಪಿಸಿಕೊಂಡು ಅದರನುಸಾರ ರಸ್ತೆಗುಂಡಿಗಳನ್ನು ಮುಚ್ಚಬೇಕು. ಆಯಾ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಹಾಗೂ ಆಯಾ ವಿಭಾಗಗಳ ಅಭಿಯಂತರರ ಸಮಕ್ಷಮದಲ್ಲಿ ಖುದ್ದು ಸ್ಥಳ ಪರಿಶೀಲನೆ ನಡೆಸಿ ರಸ್ತೆಗುಂಡಿಗಳನ್ನು ಮುಚ್ಚಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಪ್ರತಿನಿತ್ಯ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಪಾಲಿಕೆಯ ಎಂಟೂ ವಲಯಳಿಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಸರಿಯಾಗಿ ಡಾಂಬರು ಮಿಶ್ರಣ ವ್ಯವಸ್ಥೆ ಮಾಡಲು 8 ವಲಯಗಳಿಗೂ 5 ಏಜೆನ್ಸಿಗಳನ್ನು ನಿಯೋಜನೆ ಮಾಡಲಾಗಿದೆ. ಈ ಪೈಕಿ ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಡಾಂಬರು ಅವಶ್ಯಕತೆಯಿದೆ ಎಂಬುದನ್ನು ಡಾಂಬರು ಮಿಶ್ರಣ ಪೂರೈಕೆ ಮಾಡುವ ಏಜೆನ್ಸಿಗಳಿಗೆ ತಿಳಿಸಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸಬೇಕು. ರಾತ್ರಿ ವೇಳೆ ಸಂಚಾರ ದಟ್ಟಣೆ ವಿರಳವಾಗಿದ್ದು, ಈ ಸಮಯದಲ್ಲಿ ಹೆಚ್ಚಿನ ತಂಡಗಳನ್ನು ನಿಯೋಜಿಸಿಕೊಂಡು ಗುಂಡಿಗಳನ್ನು ಮುಚ್ಚಲು ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ದೋಷಮುಕ್ತ ಅವಧಿ(ಡಿಎಲ್‌ಪಿ) ಇರುವ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದರೆ ಅದನ್ನು ಗುತ್ತಿಗೆದಾರರಿಂದಲೇ ಮುಚ್ಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.ಇನ್ನೂ ಸಭೆಯಲ್ಲಿ ಎಲ್ಲಾ ವಲಯ ಆಯುಕ್ತರು, ಪ್ರಧಾನ ಅಭಿಯಂತರರು, ಎಲ್ಲಾ ವಲಯ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments