Publish Date: Tue, 26 Apr 2016 (19:09 IST)
Updated Date: Tue, 26 Apr 2016 (19:10 IST)
ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಮಥಾಯ್ ಅವರನ್ನು ಸರಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಸೇವಾ ನಿಯಮದನ್ವಯ ಮಥಾಯ್ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದ್ದು, ಅವರನ್ನು ಮಾತೃ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬಿಬಿಎಂಪಿಯಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿ ಮಥಾಯ್‌ಗೆ ಎತ್ತಂಗಡಿ ಮಾಡಿರುವ ಸರಕಾರದ ಕ್ರಮವನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎನ್ನುವಂತಾಗಿದೆ ಎಂದು ಗುಡುಗಿವೆ.
ಸರಕಾರದ ನಿಯಮಾವಳಿಗಳಿಗೆ ವ್ಯತಿರಿಕ್ತ ನಡುವಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಮಥಾಯ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ. ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಇಲಾಖೆ ಆದೇಶ ಪತ್ರದಲ್ಲಿ ತಿಳಿಸಿದೆ.