Publish Date: Mon, 27 Nov 2023 (16:00 IST)
Updated Date: Mon, 27 Nov 2023 (16:54 IST)
ಬಿಬಿಎಂಪಿಯ ನರ್ಸರಿ ಶಾಲಾ ಕಟ್ಟಡವೊಂದು ಕುಸಿದುಬಿದ್ದಿರುವ ಘಟನೆ ಇಂದು ಮುಂಜಾನೆ ಶಿವಾಜಿನಗರದಲ್ಲಿ ನಡೆದಿದೆ. ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಕ್ರಾಸ್'ನಲ್ಲಿರುವ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡ ಅವಶೇಷದಡಿ ಕೆಲ ವಾಹನಗಳು ಸಿಲುಕಿ ಜಖಂಗೊಂಡಿವೆ. ಯಾರೂ ಇರದಿದ್ದಾಗ ಬೆಳಗ್ಗಿನ ಜಾವ ಘಟನೆ ಸಂಭವಿಸಿದ ಪರಿಣಾಮ ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದೆ.
ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ನರ್ಸರಿ ಸ್ಕೂಲ್ ಕಟ್ಟಡವಾಗಿದ್ದು, ಸುಮಾರು 70 ರಿಂದ 80 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಕಟ್ಟಡ ಶಿಥಿಲಾವಸ್ಥೆ ತಲುಪಿದ್ದರೂ ಸಹ ಅದೇ ಕಟ್ಟಡದಲ್ಲಿ ಶಾಲೆ ಮುಂದುವರೆಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ಸ್ಥಳದಲ್ಲಿರುವ ಕಟ್ಟಡದ ಅವಶೇಷಗಳನ್ನ ತೆರವುಗೊಳಿಸಲಾಗುತ್ತಿದೆ.