Select Your Language

Notifications

webdunia
webdunia
webdunia
webdunia

ಜೆಡಿಎಸ್‌ನಿಂದ ಕಾದು ನೋಡುವ ತಂತ್ರ: ಕುಮಾರಸ್ವಾಮಿ

ಜೆಡಿಎಸ್‌ನಿಂದ ಕಾದು ನೋಡುವ ತಂತ್ರ: ಕುಮಾರಸ್ವಾಮಿ
ಬೆಂಗಳೂರು , ಶುಕ್ರವಾರ, 28 ಆಗಸ್ಟ್ 2015 (21:09 IST)
ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಂತಹ ಮೈತ್ರಿಯ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಬಿಬಿಎಂಪಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ ಎನ್ನವ ಆರೋಪಗಳಲ್ಲಿ ಸತ್ಯಂಶವಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿದ್ದು ಅವುಗಳ ನಡೆಯನ್ನು ಕಾದು ನೋಡುವುದಾಗಿ ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದಿಂದ ಆಯ್ಕೆಯಾದ 14 ಸದಸ್ಯರು ಸಂಪೂರ್ಣವಾಗಿ ಪಕ್ಷದ ಪರವಾಗಿದ್ದಾರೆ. ಒಂದು ವೇಳೆ ಬಿಜೆಪಿ ಆಪರೇಶನ್ ಕಮಲ್ ಮಾಡಲು ಯತ್ನಿಸಿದಲ್ಲಿ ತಕ್ಕ ಪಾಠ ಕಲಿಸುತ್ತೇನೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
 
ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳಿಸಿದ್ದರೇ ಕಾಂಗ್ರೆಸ್ 70 ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ 14 ಸ್ಥಾನ ಪಡೆದಿದ್ದರೆ, ಇತರರು 8 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

Share this Story:

Follow Webdunia kannada