ಬಿಬಿಎಂಪಿಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಯನ್ನು ಮುಂದುವರೆಸಿಕೊಂಡು ಹೋಗಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮುಂದುವರೆಸಲು ಪಕ್ಷದ ನಾಯಕರು ನಿರ್ಧರಿಸಿದ್ದಾರೆ. ಜೆಡಿಎಸ್ ಸಹ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಮುಂದುವರೆಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿಯಂತೆ ಜೆಡಿಎಸ್ ಹಾಗೂ ಪಕ್ಷೇತರರ ಬೆಂಬಲದೊಂದಿಗೆ ಪಾಲಿಕೆಯಲ್ಲಿ ಅಧಿಕಾರ ಸ್ಥಾಪಿಸುತ್ತೇವೆ. ಮೇಯರ್ ಸ್ಥಾನವನ್ನು ಕಾಂಗ್ರೆಸ್ ಹಾಗೂ ಉಪಮೇಯರ್ ಸ್ಥಾನವನ್ನು ಜೆಡಿಎಸ್ ಹಂಚಿಕೊಳ್ಳಲಿದೆ. ಈ ಕುರಿತು ಜೆಡಿಎಸ್ ನಾಯಕರೊಂದಿಗೆ ಚರ್ಚೆ ನಡೆಸುತ್ತೇವೆ ಎಂದರು.
ಬೆಂಗಳೂರಿನಲ್ಲಿರುವ ವಿಧಾನಸಭೆ, ಪರಿಷತ್, ಸಂಸದರು, ರಾಜ್ಯಸಭೆ ಸದಸ್ಯರು ಮತದಾನ ಮಾಡಲಿದ್ದಾರೆ. ಗೆಲ್ಲುವ ಕಾರಣಕ್ಕಾಗಿ ನಾವು ಸದಸ್ಯರ ವಿಲಾಸವನ್ನು ಬೆಂಗಳೂರಿಗೆ ಬದಲಾಯಿಸುವ ಅವಶ್ಯಕತೆ ಇಲ್ಲ. ಬಿಬಿಎಂಪಿಯಲ್ಲಿ ಮೈತ್ರಿಯಿಂದಲೇ ಅಧಿಕಾರ ಹಿಡಿಯುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ