ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಎಂಗೆ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದರು. ಸಿಎಂ ಸೂಚನೆ ಮೇರೆಗೆ ಸಿಎಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಿಎಸ್ ಕೋರಿದೆ. ಆಗಸ್ಟ್ ತಿಂಗಳಲ್ಲೇ ಸರ್ಕಾರ ವರದಿ ಕೇಳಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.