Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಗಳಿಗೆ ಬಿಬಿಎಂಪಿ ಕಮಿಷನರ್ ರೌಂಡ್ಸ್

Webdunia
ಬುಧವಾರ, 12 ಜುಲೈ 2023 (18:00 IST)
ನಗದರ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಇರುವಂತಹ ದುರಸ್ಥಿಕಾರ್ಯಗಳನ್ನು ಕೂಡಲೆ ಕೈಗೆತ್ತಿಕೊಂಡು ಸರಿಪಡಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು, ಇಂದಿರಾ ಕ್ಯಾಂಟೀನ್ ನಿರ್ವಹಣೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಇಂದಿರಾ ಕ್ಯಾಂಟೀನ್ ನಲ್ಲಿ ದುರಸ್ಥಿಯಲ್ಲಿರುವ ಬಲ್ಬ್, ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು. ಇಂದಿರಾ ಕ್ಯಾಂಟೀನ್ ತಪಾಸಣೆಯ ವೇಳೆ ಸಾರ್ವಜನಿಕರ ಬಳಿ ತಿಂಡಿಯ ಗುಣಮಟ್ಟ ವಿಚಾರಿಸಿದಾಗ ಪ್ರತಿನಿತ್ಯ ಅಕ್ಕಿಯಿಂದ ಮಾಡಿದಂತಹ ಆಹಾರ ಮಾತ್ರ ಲಭ್ಯವಾಗಲಿದ್ದು, ಅದನ್ನು ಬದಲಿಸಲು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಇಂದಿರಾ ಕ್ಯಾಂಟೀನ್ ಗಳಲ್ಲಿ ನೀಡುವ ಆಹಾರದ ಮೆನು ಶೀಘ್ರವೇ ಬದಲಾಗಲಿದ್ದು, ದಿನನಿತ್ಯ ಬೇರೆ-ಬೇರೆ ತಿಂಡಿ-ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
 
ಜೊತೆಗೆ ಇಂದಿರಾ ಕ್ಯಾಂಟೀನ್/ಆಹಾರದ ಗುಣಮಟ್ಟ/ಹೆಚ್ಚು ಹಣ ಪಡೆಯುವ ವಿಚಾರವಾಗಿ ದೂರುಗಳಿದ್ದಲ್ಲಿ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರುಗಳನ್ನು ನೀಡಬಹುದು ಎಂದು ತಿಳಿಸಿದರು. ಕೊನೆಯದಾಗಿ, ವಿಶ್ವನಾಥ ನಾಗೇನಹಳ್ಳಿ ವಾರ್ಡ್ ನಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನಿಡಿ ಪರಿಶೀಲನೆ ನಡೆಸಿ, ಇಂದಿರಾ ಕ್ಯಾಂಟೀನ್ ನ ನಾಮ ಫಲಕ ಹಾಳಾಗಿದ್ದು, ಅದನ್ನು ಕೂಡಲೆ ಬದಲಿಸಬೇಕು. ಇಂದಿರಾ ಕ್ಯಾಂಟೀನ್ ಗೆ ಅಳವಡಿಸಿರುವ ಮೆಟ್ಟಿಗಳು ದುರಸ್ಥಿಯಾಗಿದ್ದು, ಅದನ್ನು ಕೂಡಲೆ ಬದಲಿಸುವ ಜೊತೆ ಬೇರೆ ಸಣ್ಣ-ಪುಟ್ಟ ದುರಸ್ಥಿಗಳನ್ನು ಕಾರ್ಯಗಳನ್ನು ಕೈಗೊಂಡು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಈ ವೇಳೆ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ಸುಗುಣಾ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments