Webdunia - Bharat's app for daily news and videos

Install App

ಬಿಬಿಎಂಪಿ: ಕಾಂಗ್ರೆಸ್‌ಗೆ ಮೇಯರ್ ಪಟ್ಟ, ಜೆಡಿಎಸ್‌ಗೆ ಉಪಮೇಯರ್ ಪಟ್ಟ

Webdunia
ಸೋಮವಾರ, 26 ಸೆಪ್ಟಂಬರ್ 2016 (13:04 IST)
ಬಿಬಿಎಂಪಿಯಲ್ಲಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಮೇಯರ್ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಉಪಮೇಯರ್ ಸ್ಥಾನ ಜೆಡಿಎಸ್ ಪಕ್ಷಕ್ಕೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್‌ಗೆ ಮೊದಲಿನಿಂದಲೂ ಇಷ್ಟವಿರಲಿಲ್ಲ. ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮುಂದುವರೆಸಿಕೊಂಡು ಹೋಗಲು ಜೆಡಿಎಸ್ ಮೇಯರ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ. ಆದರೆ, ಇದೀಗ ಸಮಸ್ಯೆ ಬಗೆಹರಿದಿದೆ. ಬಿಬಿಎಂಪಿಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಸೇರಿ ಅಧಿಕಾರದಲ್ಲಿ ಮುಂದುವರಿಯುತ್ತೇವೆ ಎಂದು ಹೇಳಿದರು.
 
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯಲು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಸಾಕಷ್ಟು ಕಸರತ್ತು ಮಾಡಿದ್ದವು. ಆದರೆ, ಜೆಡಿಎಸ್ ಪಕ್ಷದೊಂದಿಗೆ ಸೇರಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸುವುದು ಬಹುತೇಕ ಖಚಿತವಾಗಿದೆ. 
 
ಬಿಜೆಪಿ ಸ್ವಂತ ಬಲದ ಮೇಲೆ ಸ್ಥಾನಗಳಿಸುವವರೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೆಡಿಎಸ್‌ನೊಂದಿಗಿನ ಮೈತ್ರಿಯನ್ನು ಪರೋಕ್ಷವಾಗಿ ತಳ್ಳಿಹಾಕಿದ್ದರು.
 
ಬಿಜೆಪಿ ಮುಖಂಡ ಮಾಜಿ ಸಚಿವ ಆರ್.ಅಶೋಕ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಯಲೇಬೇಕು ಎನ್ನುವ ಹಟದಿಂದಾಗಿ ತೆರೆಮರೆಯ ಚಟುವಟಿಕೆ ಆರಂಭಿಸಿದ್ದರು. ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಖಚಿತವಾಗಿದ್ದರಿಂದ ಅವರ ಆಸೆಗೆ ತಣ್ಣೀರು ಎರಚಿದಂತಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ದರ್ಶನ ನೀಡಲಿರುವ ಕೇದಾರನಾಥ, ಭಕ್ತರ ಸುರಕ್ಷತೆಗೆ ಬಿಗಿ ಬಂದೋಬಸ್ತ್‌

ಯುದ್ದವನ್ನು ಗೆದ್ದಿದ್ದೇವೆ ಎಂದು ಭಾವಿಸಬೇಡಿ, ತಕ್ಕ ಉತ್ತರ ನೀಡದೇ ಸುಮ್ಮನಿರಲ್ಲ: ಪಾಕ್‌ಗೆ ಅಮಿತ್ ಶಾ ಎಚ್ಚರಿಕೆ

ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

ಮುಂದಿನ ಸುದ್ದಿ
Show comments