Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮೈತ್ರಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೈಕಮಾಂಡ್‌‌ ಗ್ರೀನ್ ಸಿಗ್ನಲ್

ಬಿಬಿಎಂಪಿ ಮೈತ್ರಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೈಕಮಾಂಡ್‌‌ ಗ್ರೀನ್ ಸಿಗ್ನಲ್
ಬೆಂಗಳೂರು , ಶನಿವಾರ, 29 ಆಗಸ್ಟ್ 2015 (19:57 IST)
ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರದಲ್ಲಿರಬಾರದು. ಬಿಜೆಪಿ ಅಧಿಕಾರದಲ್ಲಿದ್ದರೆ ಪಕ್ಕದ ರಾಜ್ಯಕ್ಕೂ ಅಪಾಯ ಕಾದಿರುತ್ತದೆ. ರಾಜ್ಯ ಸರಕಾರಕ್ಕೂ ಅಪಾಯ ತರುವಂತಹದು ಎಂದು ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬಾರದಂತೆ ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷ ತಡೆಯಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ದೂರವಿರುವಂತೆ ಕೆಪಿಸಿಸಿಗೆ ಹೈಕಮಾಂಡ್ ಆದೇಶ ನೀಡಿದೆ.
 
ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಹೊಸ ನವೋಲ್ಲಾಸ ಮೂಡಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಹಿರಿಯ ನಾಯಕರು ನಾಳೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.  

Share this Story:

Follow Webdunia kannada