Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ
bangalore , ಶನಿವಾರ, 21 ಜನವರಿ 2023 (21:38 IST)
ಬೆಂಗಳೂರು ನಗರ ಭಾರತದಲ್ಲೇ ಸಾಕಷ್ಟು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಉದ್ಯೋಗಕ್ಕಾಗಿ ಅಪಾರ ಸಂಖ್ಯೆಯಲ್ಲಿ ನಗರಕ್ಕೆ ಬಂದು ನೆಲೆಸುತ್ತಾರೆ. ಈ ವೇಳೆ ಜನರಿಗೆ ಸ್ಥಳ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಸ್ವಲ್ಪ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿಯುಂಟಾಗುತ್ತದೆ. ಈ ಸಂಬಂಧ ನಾವೆಲ್ಲರೂ ನಗರದಾದ್ಯಂತ ಹೆಚ್ಚು ಸಸಿಗಳನ್ನು ನೆಟ್ಟು ಅವು ಬೆಳೆಯುವವರೆಗೆ ಪೋಷಿಸಬೇಕೆಂದು  ತುಷಾರ್ ಗಿರಿ ನಾಥ್ ರವರು ಹೇಳಿದ್ರು.
 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಕೋಟಿ ವೃಕ್ಷ ಸೈನ್ಯವು ಹಮ್ಮಿಕೊಂಡಿರುವ ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಪಾಲಿಕೆಯ ಕೇಂದ್ರ ಕಛೇರಿ ಡಾ. ರಾಜ್ ಕುಮಾರ್ ಗಾಜಿನ ಮನೆಯ ಮುಂಭಾಗ ಸಾಂಕೇತಿಕವಾಗಿ ಸಸಿ ನೆಡುವ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಅರಣ್ಯ ಇಲಾಖೆ, ಪಾಲಿಕೆಯ ಅರಣ್ಯ ವಿಭಾಗವು ಸಮನ್ವಯ ಮಾಡಿಕೊಂಡು ನಗರದಾದ್ಯಂತ ಎತೇಚ್ಛವಾಗಿ ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಅದರ ಜೊತೆಗೆ ಕೋಟಿ ವೃಕ್ಷ ಸೈನ್ಯದ ವತಿಯಿಂದಲೂ ನಗರದ ಕೆರೆಗಳು, ಉದ್ಯಾನವನಗಳು, ಮೀಸಲು ಅರಣ್ಯ ಹಾಗೂ ಇನ್ನಿತರೆ ಖಾಲಿ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು 3 ವರ್ಷಗಳ ಕಾಲ ಪೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಕಟೀಲ್ ಗೆ ಟಾಂಗ್ ಕೊಟ್ಟ ಪ್ರಿಯಾಂಕ ಖರ್ಗೆ