Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಹಿನ್ನಡೆ: 3 ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಕೋರ್ಟ್ ಆದೇಶ

Webdunia
ಮಂಗಳವಾರ, 5 ಮೇ 2015 (14:57 IST)
ಬಿಬಿಎಂಪಿ ಚುನಾವಣೆಯನ್ನು ಇನ್ನು ಮೂರು ತಿಂಗಳೊಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿ ಆದೇಶ ಹೊರಡಿಸಿದೆ. 
 
ಬಿಬಿಎಂಪಿ ಚುನಾವಣೆಯನ್ನು ವಿನಾಕಾರಣ ಮುಂದೂಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ನ ತ್ರಿ ಸದಸ್ಯ ಪೀಠ, ಸರ್ಕಾರದ ಹಾಗೂ ಅರ್ಜಿದಾರರ ವಾದ-ವಿವಾದಗಳನ್ನು ಆಲಿಸಿತು ಈ ಆದೇಶ ಹೊರಡಿಸಿದೆ.  
 
ಆದೇಶದಲ್ಲೇನಿದೆ?
6 ತಿಂಗಳ ಬಳಿಕ ಚುನಾವಣೆ ನಡೆಸುವ ಸರ್ಕಾರದ ನಡೆ ಸರಿಯಲ್ಲ. ಅಲ್ಲದೆ ಸಂವಿಧಾನ ವಿರೋಧಿ ಚಟುವಟಿಕೆ ಕೂಡ. ಆದ್ದರಿಂದ 3 ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಿ. ಆ ಬಳಿಕ ಬೇಕಾದಲ್ಲಿ ಬಿಬಿಎಂಪಿಯನ್ನು ವಿಭಜಿಸಿ. ಆದರೆ ಸೂಪರ್ ಸೀಡ್ ಹೆಸರಿನಲ್ಲಿ ಚುನಾವಣೆಯನ್ನು ಮುಂದೂಡಬಾರದು ಎಂದಿದೆ.  
 
ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ತನ್ನ ಅಭಿಪ್ರಾಯವನ್ನೂ ಕೂಡ ವ್ಯಕ್ತಪಡಿಸಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠ ನೀಡಿದ್ದ ತೀರ್ಪು ಸರಿಯಾಗಿದೆ. ಆದರೆ ವಿಭಾಗೀಯ ಪೀಠ ನೀಡಿದ ತೀರ್ಪು ಸರಿಯಲ್ಲ ಎಂದಿದ್ದು, ಚುನಾವಣೆಯನ್ನು ಶೀಘ್ರದಲ್ಲಿಯೇ ನಡೆಸಲು ಆಯೋಗ ಮುಂದಾಗಬೇಕು ಎಂದು ಚುನಾವಣಾ ಆಯೋಗಕ್ಕೂ ಕೂಡ ಸೂಚಿಸಿದೆ.  ಹೈಕೋರ್ಟ್ ಈ ಆದೇಶದಿಂದ ಸರ್ಕಾರಕ್ಕೆ ಹಿನ್ನಡೆಯುಂಟಾಗಿದ್ದು, ಪ್ರಸ್ತುತ ಬಿಬಿಎಂಪಿ ಚುನಾವಣಾ ಅಭ್ಯರ್ಥಿಗಳ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಿದೆ. ಈ ಹಿಂದೆಯೇ ಮೀಸಲಾತಿಯನ್ನು ಸರ್ಕಾರ ಒದಗಿಸಿತ್ತು. ಆದರೆ ಪರಿಷ್ಕೃತ ಪಟ್ಟಿ ತಯಾರಿಸುವ ಸಲುವಾಗಿ ಹಿಂಪಡೆದಿತ್ತು. 
 
ವಿಚಾರಣಾ ವೇಳೆ ರಾಜ್ಯ ಸರ್ಕಾರದ ಪರವಾಗಿ ಮಾಜಿ ಸಚಿವ ಕಪಿಲ್ ಸಿಬಲ್ ಹಾಗೂ ಫಿರ್ಯಾದುದಾರರು ಹಾಜರಿದ್ದರು.  
 
ಇದೇ ವಿಷಯಕ್ಕೆ ಸಂಬಂಧಿಸಿದಂತೆ ತೀರ್ಪಿತ್ತಿದ್ದ ಹೈಕೋರ್ಟ್, ಸರ್ಕಾರಕ್ಕೆ ಚುನಾವಣೆ ನಡೆಸಲು 6 ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಇಂದು ತೀರ್ಪಿತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments