Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಚುನಾವಣೆಗೆ ಸಿದ್ಧತೆ

ಬಿಬಿಎಂಪಿ ಚುನಾವಣೆಗೆ ಸಿದ್ಧತೆ
ಬೆಂಗಳೂರು , ಶುಕ್ರವಾರ, 18 ಫೆಬ್ರವರಿ 2022 (17:51 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ಪೀಠವೂ ಪಾಲಿಕೆಗೆ ಶೀಘ್ರವೇ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಚುನಾವಣಾ ಆಕಾಂಕ್ಷಿಗಳು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿ, ತುರ್ತು ವಿಚಾರಣೆಗೆ ಸಮ್ಮತಿಸಿರುವುದಾಗಿ ತಿಳಿಸಿದೆ.
 
ಅರ್ಜಿದಾರರ ಪರ ಹಿರಿಯ ವಕೀಲೆ ಮೀನಾಕ್ಷಿ ಅರೋರ ವಾದ ಮಂಡಿಸಿ, ಬಿಬಿಎಂಪಿ ಚುನಾಯಿತ ಸದಸ್ಯರ ಅವ 2020ಕ್ಕೆ ಮುಕ್ತಾಯವಾಗಿದೆ. ಆದರೆ, ಸುಪ್ರೀಂಕೋರ್ಟ್ ತಡೆಯಾಜ್ಞೆ ಪರಿಣಾಮ ಪಾಲಿಕೆಗೆ ಚುನಾವಣೆ ನಡೆಸಿಲ್ಲ ಎಂದು ವಿವರಿಸಿದರು. ವಾದ ಪರಿಗಣಿಸಿದ ಪೀಠ, ದೇಶದಲ್ಲಿ ಹಲವು ಚುನಾವಣೆಗಳು ನಡೆದಿವೆ. ನಿಮ್ಮ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸುತ್ತೇವೆ ಎಂದು ಪೀಠ ತಿಳಿಸಿದೆ.
 
ಇನ್ನೂ, ಸರಕಾರವು ಬಿಬಿಎಂಪಿ ವಾರ್ಡïಗಳನ್ನು ಹೆಚ್ಚಿಸುವ ಕಾರಣ ನೀಡಿದ್ದು, ಪಾಲಿಕೆಯ ಅವ ಮುಗಿದ ನಂತರವೂ ಚುನಾವಣೆ ನಡೆಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಮಾಜಿ ಸದಸ್ಯ ಎಂ.ಶಿವರಾಜು ಹಾಗೂ ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಹೈಕೋರ್ಟ್‍ಗೆ ಪಿಐಎಲ್ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಪಾಲಿಕೆಗೆ ಚುನಾವಣೆ ನಡೆಸಲು 2020ರ ಡಿ.4ರಂದು ಆದೇಶಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಾಬ್ ಹಾಕಲು ಅನುಮತಿ ಕೊಡಿ - ಸಿದ್ದರಾಮಯ್ಯ