Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಸಕಲ ಸಿದ್ಧತೆ

BBMP is all set for Ganesha festival
bangalore , ಶುಕ್ರವಾರ, 26 ಆಗಸ್ಟ್ 2022 (19:22 IST)
ನಗರದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರೆ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಬಿಬಿಎಂಪಿ‌ ಸೂಚನೆ ನೀಡಲಾಗಿದೆ.ಇನ್ನು ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಲು ಹಾಗೂ ನುರಿತ ಈಜುಗಾರರಿರಬೇಕು. ಮುಂಜಾಗ್ರತಾ ಕ್ರಮವಾಗಿ SDRF ಹಾಗೂ Fire Department ಇಲಾಖೆಗೆ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲು ಕೂಡಲೇ ಪತ್ರ ಬರೆಯಬೇಕೆಂದಹ ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
 
ಗಣೇಶ ವಿಸರ್ಜನಾ ಸ್ಥಳದಲ್ಲಿ ಭದ್ರತಾ ಧೃಷ್ಟಿಯಿಂದ ಪಾಲಿಕೆ ಅಧಿಕಾರಿಗಳು,ಮಾರ್ಷಲ್ ಗಳ ನಿಯೋಜನೆ, ಬ್ಯಾರಿಕೇಡಿಂಗ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
 
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿಲು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳು ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಲುವಾಗಿ 421 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಮತ್ತು 37 ತಾತ್ಕಾಲಿಕ ಕಲ್ಯಾಣಿಗಳ ವ್ಯವಸ್ಥೆ ಬಿಬಿಎಂಪಿಯಿಂದ ಮಾಡಲಾಗಿರುತ್ತದೆ. 
 

Share this Story:

Follow Webdunia kannada

ಮುಂದಿನ ಸುದ್ದಿ

28 ಕ್ಕೆ ಸಿಎಲ್ಪಿ ಸಭೆ ಮಾಡಲಿರುವ ಕಾಂಗ್ರೆಸ್ ನಾಯಕರು