Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ

ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ
ಬೆಂಗಳೂರು , ಗುರುವಾರ, 15 ಸೆಪ್ಟಂಬರ್ 2016 (12:35 IST)
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಸೆಪ್ಟೆಂಬರ್ 19 ಕ್ಕೆ ನಿಗದಿಯಾಗಿತ್ತು. ಆದರೆ, ಮತದಾರರ ಪಟ್ಟಿಯಲ್ಲಿ ಗೊಂದಲಗಳಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಚುನಾವಣೆಯನ್ನು ಸೆಪ್ಟೆಂಬರ್ 28 ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.
 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ಸ್ಥಾಪಿಸಲು ರಾಜಕೀಯ ಪಕ್ಷಗಳ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡುತ್ತಿದ್ದಾರೆ ಎನ್ನು ವ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿಲ್ಲ ಎಂದು ಹೇಳಲಾಗುತ್ತಿದೆ.  
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ 15 ಕ್ಕೂ ಹೆಚ್ಚು ಶಾಸಕರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಸಂಚು ನಡೆಸಿದೆ. ಅದರಲ್ಲಿ ಇತ್ತರ ಕರ್ನಾಟಕದ 12 ಶಾಸಕರಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಆರೋಪಿಸಿದ್ದಾರೆ.
 
ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಕಾಂಗ್ರೆಸ್ ಹಿರಿಯ ಮುಖಂಡ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಉಗ್ರಪ್ಪ ಸೇರಿದಂತೆ  ಕೆಲವು ಶಾಸಕರು 30 ವರ್ಷಗಳಿಗಿಂತ ಹೆಚ್ಚು ಬೆಂಗಳೂರಿನಲ್ಲಿ ನೆಲೆಸಿದ್ದರಿಂದ ಅವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಶಿಫಾರಸ್ಸು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿವಾಹಪೂರ್ವ ಒಂದು ಪ್ರಶ್ನೆ | ಕಿರುಚಿತ್ರ (ತಪ್ಪದೇ ನೋಡಿ)