Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮೇಯರ್ ಚುನಾವಣೆ: ಜಿ. ಪರಮೇಶ್ವರ್- ದೇವೇಗೌಡ, ಎಚ್‌ಡಿಕೆ ಚರ್ಚೆ

ಬಿಬಿಎಂಪಿ ಮೇಯರ್ ಚುನಾವಣೆ: ಜಿ. ಪರಮೇಶ್ವರ್- ದೇವೇಗೌಡ, ಎಚ್‌ಡಿಕೆ ಚರ್ಚೆ
ಬೆಂಗಳೂರು , ಶನಿವಾರ, 24 ಸೆಪ್ಟಂಬರ್ 2016 (18:42 IST)
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ.
 
ಈ ವೇಳೆ ಬಿಬಿಎಂಪಿಯಲ್ಲಿ ಮೇಯರ್ ಸ್ಥಾನ ಬಿಟ್ಟುಕೊಡುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ. 
 
ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಆದರೆ, ಕುಮಾರಸ್ವಾಮಿ ಅವರು ಮೇಯರ್ ಸ್ಥಾನಕ್ಕೆ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಇವರ ಭೇಟಿ ಫಲ ನೀಡಿಲ್ಲ ಎನ್ನಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಮೈತ್ರಿ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಈ ಸಂಖ್ಯೆಗೆ ಕರೆ ಮಾಡಿ ರಿಲಯನ್ಸ್ ಜಿಯೋ ಸಿಮ್ ಪಡೆಯಿರಿ