ಬಿಬಿಎಂಪಿಯಲ್ಲಿ ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ. ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಕಾರ್ಯತಂತ್ರ ರೂಪಿಸುತ್ತೇವೆ ಎಂದು ಡಿಸಿಎಂ ಆರ್.ಅಶೋಕ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಸೆಪ್ಟೆಂಬರ್ 28 ರಂದು ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯಲಿದೆ. ಸೆಪ್ಟೆಂಬರ್ 27 ರಂದು ಸದಸ್ಯರು ಹಾಗೂ ಶಾಸಕರು ಸೇರಿ ಸಮಾಲೋಚನೆ ನಡೆಸುತ್ತೇವೆ ಎಂದು ಹೇಳಿದರು.
ಕೆ.ಜೆ.ಜಾರ್ಜ್ ಸಂಪುಟ ಸೇರಲು ಬಿಜೆಪಿ ವಿರೋಧ..........
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಕೆ.ಜೆ.ಜಾರ್ಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಸಮಂಜಸವಲ್ಲ. ಸಿಐಡಿ ತನಿಖೆ ಪೂರ್ಣಗೊಳ್ಳಲು ಕನಿಷ್ಠ ಮೂರು ವರ್ಷ ಬೇಕು. ಆದರೆ, ಜಾರ್ಜ್ ಅವರಿಗೆ ಇಷ್ಟು ಬೇಗ ಕ್ಲೀನ್‌ಚೀಟ್ ನೀಡಿರುವುದು ಅಚ್ಚರಿ ಮೂಡಿಸಿದೆ. ಮುಖಅಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕಾವೇರಿ ವಿಚಾರ ಚರ್ಚೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‌ರನ್ನು ಭೇಟಿಯಾಗಿ ಚರ್ಚೆ ನಡೆಸಿಲ್ಲ. ಬದಲಾಗಿ ಕೆ.ಜೆ.ಜಾರ್ಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಹೈಕಮಾಂಡ್‌ರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಗಂಭೀರವಾಗಿ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ