Publish Date: Sat, 27 Aug 2016 (16:49 IST)
Updated Date: Tue, 28 Jul 2020 (17:16 IST)
ಈ ಬಾರಿ ಮೇಯರ್ ಸ್ಥಾನ ನಮಗೆ ಬಿಟ್ಟು ಕೊಡಿ ಎಂದು ಬೇಡಿಕೆ ಇಡುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ.
ಎರಡನೇಯ ಅವಧಿಗೆ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಸಿಕೊಂಡು ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು, ಈ ಬಾರಿ ಬಿಬಿಎಂಪಿಯಲ್ಲಿ ಮೇಯರ್ ಸ್ಥಾನ ನಮಗೆ ಬಿಟ್ಟು ಕೊಡಿ, ಮುಂದಿನ ಮೂರು ವರ್ಷಗಳ ಕಾಲ ನಾವು ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇವೆ. ಇಲ್ಲವಾದಲ್ಲಿ ಬಿಬಿಎಂಪಿ ಮೇಯರ್ ಆಯ್ಕೆಯಲ್ಲಿ ಜೆಡಿಎಸ್ ತಟಸ್ಥವಾಗಿರುತ್ತದೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಬೇಡಿಕೆಯಿಂದ ಬಿಬಿಎಂಪಿಯಲ್ಲಿ ಎರಡನೇಯ ಅವಧಿಗೆ ಅಧಿಕಾರ ಮುಂದುವರೆಸಿಕೊಂಡು ಹೋಗುವ ನಿರೀಕ್ಷೆ ಹೊಂದಿದ್ದ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ ಶುರುವಾಗಿದೆ.
ಬಿಬಿಎಂಪಿಯಿಂದ ಬಿಜೆಪಿಯನ್ನು ದೂರ ಇಡಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಬಿಬಿಎಂಪಿಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದ್ದವು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ