Publish Date: Tue, 17 Jan 2023 (19:47 IST)
Updated Date: Tue, 17 Jan 2023 (19:49 IST)
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮತ್ತೆ ಮುಖ್ಯರಸ್ತೆಗಳು ಕುಸಿಯುತ್ತಿದ್ದು, ಮಹಾಲಕ್ಷ್ಮಿ ಲೇಔಟ್ ಮುಖ್ಯರಸ್ತೆಯ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ರಸ್ತೆ ಕುಸಿದಿದೆ. BBMPಯ ಕಳಪೆ ಕಾಮಗಾರಿಗೆ ಮಹಾಲಕ್ಷ್ಮಿ ಲೇಔಟ್ ಕುಸಿದ ರಸ್ತೆ ಸಾಕ್ಷಿಯಾಗಿದೆ. ಗುಂಡಿ ಬಿದ್ದ ರಸ್ತೆಯಲ್ಲಿ BBMP ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿಲ್ಲ ಅಂತಾ ಬಿಬಿಎಂಪಿ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರಹಾಕಿದ್ದಾರೆ.