ಬೆಂಗಳೂರು ನಗರದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳಿಗೆ ಭೇಟಿ ನೀಡಿ 810 ಕೆ.ಜಿ. ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಕಾರ್ಖಾನೆಗೆ 5 ಸಾವಿರ ದಂಡವನ್ನು ವಿಧಿಸಿದ್ದಾರೆ. ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳನ್ನು ಪರಿಶೀಲಿಸಿ, ಸುಮಾರು 810 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿರುತ್ತದೆ. ಸದರಿ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ದಾಸರಹಳ್ಳಿ ವಲಯದ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧೀಕ್ಷಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಾರ್ಷಲ್ ಸೂಪರ್ವೈಜರ್ ಮತ್ತು ಇನ್ನಿತರ ಅಧಿಕಾರಿಗಳು ಸ್ಥಳದಲ್ಲಿದ್ದರು. ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಉತ್ಪಾದನೆ ಮಾಡದಂತೆ ಸೂಚನೆ ನೀಡಲಾಗಿರುತ್ತದೆ.