ರಮೇಶ್ ಅವರು, ಸೀಮಿತ ವಾರ್ಷಿಕ ಆದಾಯವನ್ನು ಹೊಂದಿರುವ ಪಾಲಿಕೆಯ ಆರ್ಥಿಕ ವ್ಯವಸ್ಥೆಯನ್ನೇ ಬುಡ ಮೇಲು ಮಾಡಲು ಹೊರಟಿರುವ ಆಯುಕ್ತರು ದಿನಾಂಕ ನಮೂದಿಸಿದೇ ಬಿಲ್ಡರ್ ಗಳ ಪರವಾಗಿ ಬಿಬಿಎಂಪಿ ವಿರೋಧೀ ನಿರ್ಣಯ ಕೈಗೊಂಡಿದ್ದಾಗಿ ಹೇಳಿದ್ದಾರೆ.ಅಧಿಕಾರ ದುರುಪಯೋಗದ ಮೇಲೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ನಗರ ಯೋಜನೆಯ ಜಂಟಿ ನಿರ್ದೇಶಕ (ಉತ್ತರ) ಮಂಜೇಶ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (BMTF) ಗಳಲ್ಲಿ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದರು.