Publish Date: Mon, 08 Aug 2016 (10:05 IST)
Updated Date: Mon, 08 Aug 2016 (10:07 IST)
ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೇಯರ್ ಅವರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಪ್ರಭಾವಿಗಳ ಕಟ್ಟಡಗಳನ್ನು ತೆರುವುಗೊಳಿಸಲು ಹಿಂದೇಟು ಹಾಕುತ್ತಿದ್ದು, ಕೇವಲ ಬಡವರ ಮನೆಗಳನ್ನು ಮಾತ್ರ ತೆರವುಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಗರದಲ್ಲಿ ಪ್ರಭಾವಿ ಬಿಲ್ಡರ್‌ಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದು, ಐಟಿ ಕಂಪೆನಿ, ಮಾಲ್‌ಗಳು ಹಾಗೂ ಟೆಕ್ ಪಾರ್ಕ್ ನಿರ್ಮಾಣ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಹಾಗೂ ಸರಕಾರ ಬಡವರಿಗೊಂದು ನ್ಯಾಯ ಬಲ್ಲಿದವರಿಗೊಂದು ನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಮೇಶ್ ಅವರು ಮುಖ್ಯಮಂತ್ರಿ ಹಾಗೂ ಮೇಯರ್ ಅವರಿಗೆ ಪತ್ರ ಬರೆದಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.