Select Your Language

Notifications

webdunia
webdunia
webdunia
webdunia

2023ರ ಅಂತಿಮ ಮತದಾರರ ಪಟ್ಟಿ ಪ್ರಕಟ

webdunia
bangalore , ಭಾನುವಾರ, 15 ಜನವರಿ 2023 (13:56 IST)
ಬಿಬಿಎಂಪಿ ವ್ಯಾಪ್ತಿಯ 3 ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರಕ್ಕೆ ಸಂಬಂಧಿಸಿದಂತೆ ಇಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 9,80,542 ಮತದಾರರಿದ್ದಾರೆ. 
 
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ 25 ವಿಧಾನ ಸಭಾ ಕ್ಷೇತ್ರಗಳ ಪಟ್ಟಿಯನ್ನು ದಿನಾಂಕ: 05.01.2023 ರಂದು ಪ್ರಕಟಿಸಲಾಗಿತ್ತು. ಇದೀಗ ಉಳಿದ 3 ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರದಲ್ಲಿ ಒಟ್ಟು 990542 ಮತದಾರರಿದ್ದಾರೆ. ಅದರಲ್ಲಿ 515983 ಪುರುಷರು, 464415 ಮಹಿಳೆಯರು ಹಾಗೂ 144 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದು, 3 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ಪ್ರಕಟಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿ ವರ್ಷದಂತೆ ಈ ವರ್ಷವೂ ಗವಿ ಗಂಗಾಧರ ದೇವಾಲಯದಲ್ಲಿ ನಡೆಯಲಿದೆ ಕೌತುಕ