ಜೆಪಿ ನಗರ ಬಡಾವಣೆಯ ಆಲಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಸರ್ವೆ ಸಂಖ್ಯೆ 5/7, 6/1, 6/4, 6/5, 7/2, 3, 4 ಮತ್ತು 8 ರ 4 ಎಕರೆ 20 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್ ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎಗೆ ಸೇರಿದ ಹಲವಾರು ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಆಸ್ತಿಗಳನ್ನು ಮರು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಒಂದು ತಿಂಗಳಿಂದ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ. ಹಲವಾರು ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಆಸ್ತಿಗಳನ್ನು ಒತ್ತುವರಿ ಅಥವಾ ಭೂಕಬಳಿಕೆದಾರರು ಕಬಳಿಕೆ ಮಾಡಿದ್ದಾರೆ. ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಆಸ್ತಿಯನ್ನು ಮರು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.