Select Your Language

Notifications

webdunia
webdunia
webdunia
webdunia

ಬಿಡಿಎ ಜಾಗ ವಶ

ಬಿಡಿಎ ಜಾಗ ವಶ
bangalore , ಮಂಗಳವಾರ, 28 ಜೂನ್ 2022 (20:25 IST)
ಬೆಳ್ಳಂಬೆಳಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ, ಸುಮಾರು 100 ಕೋಟಿ ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ. ನಗರದ ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ನಿರ್ಮಿಸಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ತೆರವು ಮಾಡಿರಲಿಲ್ಲ.ಈ ಹಿನ್ನೆಲೆಯಲ್ಲಿ ಇಂದು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ.ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು 200 ಪೊಲೀಸ್  ರ  ನೆರವಿನಿಂದ 15 ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್ ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಣ ಇಲಾಖೆಗೆ ಹೊಸ ವೆಬ್ ಸೈಟ್