ಬಿಡಿಎ ಮಹತ್ವಾಕಾಂಕ್ಷೆಯ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಟೆಂಡರ್ ಆಹ್ವಾನಿಸಲಾಗಿದೆ. 73.04 ಕಿ.ಮೀ ಉದ್ದದ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆ ಇದಾಗಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ.
ಮೇ 20ರಂದು ಟೆಕ್ನಿಕಲ್ ಬಿಡ್ ತೆರೆಯಲಿದೆ. ಬಿಡ್‌ದಾರರು ಭದ್ರತಾ ಠೇವಣಿಯಾಗಿ .150 ಕೋಟಿ ಪಾವತಿಸಬೇಕಾಗುತ್ತದೆ.
ಯೋಜನೆಯ ಭೂಸ್ವಾಧೀನ ಮತ್ತು ರಸ್ತೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಸಂಪೂರ್ಣ ಭರಿಸುವ ಬಿಡ್‌ದಾರ ಕಂಪನಿಗೆ 50 ವರ್ಷ ಭೋಗ್ಯದ ಆಧಾರದ ರಸ್ತೆ ಹಾಗೂ ಟೋಲ್ ಗುತ್ತಿಗೆ ಸಿಗಲಿದೆ. ಇನ್ನೂ ಪೆರಿಫೆರಲ್ ರಿಂಗ್ ರಸ್ತೆಯ ನಿರ್ಮಾಣದಿಂದ ನಗರದಲ್ಲಿ ವಾಹನ ದಟ್ಟಣೆ ನಿವಾರಣೆಯಾಗಲಿದೆ ಎಂದು ಹೇಳಲಾಗಿದೆ.