Publish Date: Fri, 06 Dec 2019 (20:02 IST)
Updated Date: Fri, 06 Dec 2019 (20:04 IST)
ರಾಜ್ಯದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿ ಗೆದ್ದವರು ಸಚಿವರಾಗೋದು ಪಕ್ಕಾ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.
ಹದಿನೈದು ವಿಧಾನಸಭೆ ಕ್ಷೇತ್ರಗಳಲ್ಲಿ ಗೆದ್ದವರಿಗೆಲ್ಲ ಸಚಿವ ಸ್ಥಾನ ಸಿಗುತ್ತದೆ. ಹೀಗಂತ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಅನರ್ಹ ಶಾಸಕರು ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅವರಿಗೆ ಕೊಟ್ಟಿರುವ ಮಾತಿನಂತೆ ನಡೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
15 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದರೆ ಎಲ್ಲರನ್ನೂ ಸಚಿವರನ್ನಾಗಿ ಮಾಡಲಾಗುತ್ತದೆ ಎಂದಿದ್ದಾರೆ.