ಚಿಕ್ಕಬಳ್ಳಾಪುರ : ಕೆರೆಯ ಬಳಿ ರೀಲ್ಸ್ ಮಾಡಲು ಹೋದ ಯುವತಿ ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.
 
ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22)  ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
 
 			
 
 			
			                     
							
							
			        							
								
																	 
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. 
									
										
								
																	ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ.