Publish Date: Thu, 09 Apr 2020 (07:15 IST)
Updated Date: Thu, 09 Apr 2020 (09:30 IST)
ಮುಂಬೈ : ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಅದರಲ್ಲೂ ,ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿದಾಟಿದೆ. ಈ ಹಿನ್ನಲೆಯಲ್ಲಿ ಮುಂಬೈ ಮಾಸ್ಕ್ ಧರಿಸುವುದು ಕಡ್ಡಾಯ ಎನ್ನಲಾಗಿದೆ.
ಈ ಬಗ್ಗೆ ಎಚ್ಚರಿಕೆ ನೀಡಿದ್ದ ಮುಂಬೈ ನಗರ ಪಾಲಿಕೆ ಆಯುಕ್ತ ಪ್ರವೀಣ್ ಪರದೇಶಿ, ಮಾಸ್ಕ್ ಯಾವ ಗುಣಮಟ್ಟದೇ ಆಗಿರಬಹುದು. ಆದರೆ ಮಾಸ್ಕ್ ಧರಿಸದೆ ಯಾರು ಹೊರಗೆ ಬರುವಂತಿಲ್ಲ. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕಚೇರಿಗಳಲ್ಲಿ, ಸಭೆ ಮತ್ತು ವಾಹನಗಳ ಒಳಗೂ ಮಾಸ್ಕ್ ಧರಿಸುವುದು ಕಡ್ಡಾಯ. ಒಂದು ವೇಳೆ ಮಾಸ್ಕ್ ಧರಿಸದೆ ಹೊರಗೆ ಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.