ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

Sampriya
ಶನಿವಾರ, 1 ನವೆಂಬರ್ 2025 (15:30 IST)
ಬೆಂಗಳೂರು: ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ  ಕಸ ಎಸೆಯುವವರು ಇನ್ನು ಮುಂದೆ ಭಾರೀ ಬೆಲೆ ತೆರಬೇಕಾಗುತ್ತದೆ. ರಸ್ತೆರಸ್ತೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸರ್ಕಾರ ನಿರ್ಧರಿಸಿದೆ. 

ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. 

ವಿಧಾನಸೌಧದ ಬಳಿಯ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಈಗಾಗಲೇ‌‌ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ನಗರದಲ್ಲಿ ಅಳವಡಿಸಲಾಗಿದೆ. ಇದರಿಂದ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಗುರುತಿಸಿ ಅವರ ಮನೆ ಮುಂದೆಯೇ ಅದೇ ಕಸ ಸುರಿದು ಬುದ್ದಿವಾದ ಹೇಳುವ ಕೆಲಸ ಮಾಡಲಾಗುತ್ತಿದೆ ಎಂದರು.

ಶುಕ್ರವಾರದಂದು ಮುಂಬೈಗೆ ತೆರಳಿದ್ದೆ. ಅಲ್ಲಿಯೂ ಸಹ ಮೂಲೆ,‌ ಮೂಲೆಯಲ್ಲಿ ಕಸ ರಾಶಿ ಬಿದ್ದಿತ್ತು. ಬೇರೆ, ಬೇರೆ ಕಡೆಯಲ್ಲಿಯೂ ಬಿದ್ದಿರಬಹುದು. ಜನರು ತಮಗೆ ಇರುವ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ನಿಲ್ಲಿಸಬೇಕು. ಜನರು ಸ್ವಚ್ಛ ಬೆಂಗಳೂರಿಗೆ ಹೆಚ್ಚು ಸಹಕಾರ ನೀಡಬೇಕು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments