Select Your Language

Notifications

webdunia
webdunia
webdunia
webdunia

ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ : ಜಮೀರ್

ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ :  ಜಮೀರ್
ಬೆಂಗಳೂರು , ಮಂಗಳವಾರ, 13 ಜೂನ್ 2023 (11:36 IST)
ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
 
ಸೋಮವಾರ ಬೆಂಗಳೂರಿನಲ್ಲಿ ಅವರು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಯಾವುದೇ ಹಂತದಲ್ಲೂ ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು.

ಮುಖ್ಯವಾಗಿ ಉನ್ನತ ಶಿಕ್ಷಣದ ವೇಳೆ ಶಿಕ್ಷಣದಿಂದ ದೂರ ಸರಿಯದಂತೆ ನೋಡಿಕೊಳ್ಳಬೇಕು. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಶಾಲೆ, ಕಾಲೇಜ್, ವಸತಿ ಶಾಲೆ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕಳೆದ 5 ವರ್ಷಗಳ ಕಾಮಗಾರಿಯಲ್ಲಿ ಗುತ್ತಿಗೆದಾರರಿಗೆ ಪಾವತಿಸಿದ ಹಣದ ಮಾಹಿತಿಯನ್ನು ಕೇಳಿದ್ದಾರೆ. ಅಲ್ಲದೇ ಮುಂದೆ ಕಾಲೋನಿಗಳ ಅಭಿವೃದ್ಧಿ ಪ್ರಸ್ತಾವನೆಗಳು ಬಂದರೆ ಸ್ಥಳಕ್ಕೆ ಹೋಗಿ ಆ ಕಾಮಗಾರಿಯ ಅಗತ್ಯದ ಬಗ್ಗೆ ಪರಿಶೀಲಿಸಬೇಕು. ಅದರ ವರದಿ ನೀಡಲು ತಜ್ಞರ ತಂಡ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ