ಪಂಚ ರಾಜ್ಯಗಳ ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡನೆ ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡನೆ ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಹಠ ಹಿಡಿದು ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೇಂದ್ರ ಸರಕಾರದ ಈ ಬಜೆಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ವಾಗ್ದಾಳಿ ನಡೆಸಿದರು.
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸಮೀಕ್ಷೆ ನಡೆಸಿ ಬಜೆಟ್ ಸಿದ್ಧಪಡಿಸಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡನೆ ಸರಿಯಲ್ಲವೇ ಅಲ್ಲ ಎಂದು ಅಭಿಪ್ರಾಯಪಟ್ಟರು.
ಈವರೆಗೂ ಕೇಂದ್ರ ಸರಕಾರ ಬಜೆಟ್‌ನ್ನು ಫಬ್ರವರಿ 28ರಂದು ಮಂಡಿಸುವ ರೂಢಿ ಇತ್ತು. ಆದರೆ, ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ನ್ನು ಫೆಬ್ರವರಿ 1ರಂದೆ ಮಂಡಿಸಲಾಗುತ್ತಿದ್ದು, ಈ ಬಜೆಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ವಿಪಕ್ಷಗಳು ಕಿಡಿಕಾರಿದ್ದವು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ