Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ: ಯಾವ್ಯಾವ ವಿಷಯ ಚರ್ಚೆ...?

webdunia
ಸೋಮವಾರ, 13 ಡಿಸೆಂಬರ್ 2021 (20:14 IST)
ಇಂದಿನಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ.
ಒಮಿಕ್ರಾನ್ ಭೀತಿ ನಡುವೆಯೂ ಸದಸ್ಯರು ಕಲಾಪದಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿ ಸಾಕಷ್ಟು ವಿಷಯಗಳು ಚರ್ಚೆ ಆಗುವ ಸಾಧ್ಯತೆ ಇದೆ. ಮುಖ್ಯವಾಗಿ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆಯಾಗಲಿದ್ದು, ಈಗಾಗಲೇ ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಹಾಗಾಗಿ ಸದನದಲ್ಲಿ ಗದ್ದಲ ಸಾಧ್ಯತೆ ಹೆಚ್ಚಿದೆ.
ಬಿಟ್ ಕಾಯಿನ್ ದಂಧೆ, ಗುತ್ತಿಗೆದಾರರಿಗೆ ಶೇ.40ರಷ್ಟು ಕಮಿಷನ್ ಬಗ್ಗೆಯೂ ಚರ್ಚೆಯಾಗಲಿದೆ.
ಕೋವಿಡ್ ಮತ್ತು ನೆರೆ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು, ಅಕಾಲಿಕ ಮಳೆಯಿಂದ ರೈತರಿಗಾಗಿರುವ ಕಷ್ಟಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ವಿಪಕ್ಷಗಳು ಮಾತನಾಡಲು ತಯಾರಾಗಿವೆ.
ಈ ನಡುವೆ ಬೆಳೆ ಹಾನಿಗೆ ಸೂಕ್ತ ಪರಿಹಾರ ಕೋರಿ ರೈತರು ಧರಣಿ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಕೆಲವು ರೈತ ಸಂಘಟನೆಗಳು ಸಜ್ಜಾಗಿವೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪಾದಯಾತ್ರೆ ಬಂದು ರೈತರು ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಡೆಲ್ಟಾಕ್ಕಿಂತ ವೇಗವಾಗಿ ಹರಡುತ್ತೆ ಒಮಿಕ್ರಾನ್: ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು..?